(1) (ಓ ಪ್ರವಾದಿಯವರೇ!) ಹೇಳಿರಿ: ‘ಅವನು ಅಲ್ಲಾಹು! ಏಕಮೇವನಾಗಿರುವನು.
(2) ಅಲ್ಲಾಹು ಸರ್ವರಿಗೂ ಆಶ್ರಯದಾತನಾಗಿರುವನು.
(3) ಅವನು (ಯಾರಿಗೂ) ಜನ್ಮವನ್ನು ನೀಡಿಲ್ಲ. ಅವನು (ಯಾರದೇ ಸಂತತಿಯಾಗಿ) ಜನಿಸಿದವನೂ ಅಲ್ಲ.
(4) ಅವನಿಗೆ ಸರಿಸಾಟಿಯಾಗಿ ಯಾರೂ ಇಲ್ಲ’.